ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೇಶದಲ್ಲಿಯೇ ಮೊದಲಿಗೆ ಕೊರೋನಾಗೆ ಬಲಿಯಾದ ಬಡವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆ ಘೋಷಿಸಿದ್ದಾರೆ.
25,000 ಬಿಪಿಎಲ್ ಕುಟುಂಬಗಳಿಗೆ ಇದರಿಂದ ಪ್ರಯೋಜನವಾಗಲಿದೆ. 250 ರಿಂದ 300 ಕೋಟಿ ರೂಪಾಯಿ ವೆಚ್ಚವಾಗುತ್ತದೆ. ವಯಸ್ಕರು, ಕುಟುಂಬದ ಆಧಾರ ಸ್ತಂಭವಾಗಿದ್ದವರು ಕೋವಿಡ್ ನಿಂದ ಮೃತರಾಗಿದ್ದರೆ ಅವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಕುಟುಂಬದಲ್ಲಿ ಎಷ್ಟೇ ಜನ ಮೃತಪಟ್ಟಿದ್ದರೂ ಒಂದು ಲಕ್ಷ ರೂಪಾಯಿ ಮಾತ್ರ ಪರಿಹಾರ ಸಿಗಲಿದೆ.
ಬೆಂಗಳೂರಿನಲ್ಲಿ 15,000 ಸೇರಿದಂತೆ ರಾಜ್ಯದಲ್ಲಿ ಸುಮಾರು 33,000 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರಲ್ಲಿ ಬಿಪಿಎಲ್ ವರ್ಗದ 25,000 ಜನರಿಗೆ ಪರಿಹಾರ ನೀಡಲಾಗುವುದು.