ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ತೀರಾ ಆತಂಕವನ್ನುಂಟು ಮಾಡಿದೆ. ಸೋಂಕಿತರು ಮತ್ತು ಸಾವಿನ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಬಂದಿದೆ ಎಂದು ಸಚಿವರೇ ಹೇಳಿದ್ದು, ಕಠಿಣ ಕ್ರಮ ಅನಿವಾರ್ಯ ಎಂದು ತಿಳಿಸಿದ್ದಾರೆ. ಐಸಿಯು, ಆಕ್ಸಿಜನ್ ಬೆಡ್ ಕೊರತೆ ಕಂಡು ಬಂದಿದೆ. ನಾಳೆ ಮಹತ್ವದ ಸಭೆ ನಡೆಯಲಿದ್ದು, ಕಠಿಣ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ.
ಲಾಕ್ಡೌನ್ ಹೊರತಾಗಿ ಆರ್ಥಿಕತೆ ದೃಷ್ಟಿಯಲ್ಲಿಟ್ಟುಕೊಂಡು ಕಠಿಣ ನಿಯಮ ರೂಪಿಸಲಾಗುತ್ತದೆ ಎಂದು ಹೇಳಲಾಗಿದ್ದು, ಜನ ಸೇರುವ ಸ್ಥಳಗಳಲ್ಲಿ ನಿರ್ಬಂಧ ಹೇರಲಿದ್ದು, ಮದ್ಯದಂಗಡಿ ಬಂದ್ ಮಾಡುವ ಸಾಧ್ಯತೆ ಇದೆ. ಸಿನಿಮಾ ಹಾಲ್, ಚಿತ್ರೀಕರಣವನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಕೊರೋನಾ ಸರಪಳಿ ತುಂಡರಿಸಲು ಬೆಂಗಳೂರು ಸೇರಿದಂತೆ ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ. ನಾಳೆ ಸರ್ಕಾರ ಮಹತ್ವದ ಸಭೆ ನಡೆಯಲಿದ್ದು, ಕಠಿಣ ನಿಯಮ ಜಾರಿಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.