alex Certify BIG NEWS: ಜನವರಿ 19 ಕ್ಕೆ ಕಠಿಣ ರೂಲ್ಸ್ ಅಂತ್ಯ, ನಾಳಿನ ಸಭೆಯಲ್ಲಿ ಮತ್ತಷ್ಟು ನಿಯಮ ಜಾರಿ ಬಗ್ಗೆ ಚರ್ಚಿಸಿ ತೀರ್ಮಾನ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜನವರಿ 19 ಕ್ಕೆ ಕಠಿಣ ರೂಲ್ಸ್ ಅಂತ್ಯ, ನಾಳಿನ ಸಭೆಯಲ್ಲಿ ಮತ್ತಷ್ಟು ನಿಯಮ ಜಾರಿ ಬಗ್ಗೆ ಚರ್ಚಿಸಿ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶರವೇಗದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು.

ನಾಳೆ ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಯಲಿದ್ದು, ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಕೂಡ ಭಾಗಿಯಾಗಲಿದ್ದಾರೆ. ಇವರೊಂದಿಗೆ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕೊರೋನಾ ತಡೆಗೆ ರಾಜ್ಯದಲ್ಲಿ ಸದ್ಯ ವಿಧಿಸಲಾಗಿರುವ ಕಠಿಣ ನಿಯಮಗಳು ಜನವರಿ 19 ಕ್ಕೆ ಅಂತ್ಯವಾಗಲಿವೆ. ಜನವರಿ 31 ರ ವರೆಗೆ ಅನೇಕ ನಿಯಮಗಳು ಮುಂದುವರೆಯಲಿವೆ. ಜ. 17 ರ ಸೋಮವಾರ ಬೆಳಗ್ಗೆ 5 ಗಂಟೆಗೆ ವೀಕೆಂಡ್ ಕರ್ಫ್ಯೂ ಕೂಡ ಮುಕ್ತಾಯವಾಗಲಿದೆ.

ಹೀಗಾಗಿ ನಾಳಿನ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ, ಕಠಿಣ ನಿಯಮಗಳನ್ನು ಮುಂದುವರೆಸುವ ಕುರಿತಾಗಿ ಚರ್ಚೆ ನಡೆಸಲಾಗುತ್ತದೆ. ಅಲ್ಲದೆ, ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...