ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಸ್ವಂತ ಅಥವಾ ಯಾವುದೇ ವಾಹನದಲ್ಲಿದ್ದರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ರೆಸ್ಟೋರೆಂಟ್, ಶಾಪಿಂಗ್ ಮಾಲ್, ಪಬ್, ಹೋಟೆಲ್, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ ಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.