ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಹೆಚ್ಚಳವಾಗಿದೆ.
ಒಂದೇ ಶಾಲೆಯ 19 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಶಾಲೆಯೊಂದರ ಮಕ್ಕಳಿಗೆ ಸೋಂಕು ತಗಲಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆಹೋಮ್ ಐಸೋಲೇಷನ್ ನಲ್ಲಿಡಲಾಗಿದೆ.
ಎಂ. ಶೆಟ್ಟಹಳ್ಳಿ ಗ್ರಾಮದಲ್ಲಿ 12 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಎಂ. ಶೆಟ್ಟಹಳ್ಳಿ ಗ್ರಾಮಕ್ಕೆ ಶ್ರೀರಂಗಪಟ್ಟಣ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಹಬ್ಬ, ಕಾರ್ಯಕ್ರಮಗಳನ್ನು ನಡೆಸದಂತೆ ಸೂಚನೆ ನೀಡಲಾಗಿದೆ. ನೆಂಟರನ್ನು ಕರೆಸಿಕೊಳ್ಳದಂತೆ ತಿಳಿಸಿದ್ದು, ಗ್ರಾಮದಲ್ಲಿ ರ್ಯಾಂಡಮ್ ಟೆಸ್ಟ್ ಮಾಡುವಂತೆ ಸೂಚನೆ ನೀಡಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಯುವಕರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಸೋಂಕು ತಗಲಿದೆ. 15 ದಿನದಲ್ಲಿ 138 ಜನರಿಗೆ ಸೋಂಕು ತಗಲಿದ್ದು 70 ಯುವಕರು, 11 ಮಕ್ಕಳು ಹಾಗೂ 57 ವೃದ್ಧರಿಗೆಲ್ಲಿ ಸೋಂಕು ತಗುಲಿದೆ ಎಂದು ಹೇಳಲಾಗಿದೆ.
ಬಾಗಲಕೋಟೆಯ ಮಾರವಾಡಿ ಗಲ್ಲಿಯಲ್ಲಿರುವ ಉದ್ಯಮಿ ಮನೆಯಲ್ಲಿ ಮತ್ತೆ ನಾಲ್ವರಿಗೆ ಕೊರೋನಾ ಸೋಂಕು ತಗುಲಿದೆ. ನಿನ್ನೆ ಇದೇ ಕುಟುಂಬದ ಐದು ಜನರಿಗೆ ಸೋಂಕು ತಗಲಿದ್ದು, ಮಿನಿ ಕಂಟೇನ್ಮೆಂಟ್ ಜೋನ್ ಮಾಡಲಾಗಿದೆ ಎಂದು ಬಾಗಲಕೋಟೆ ಆರೋಗ್ಯಾಧಿಕಾರಿ ಹೇಳಿದ್ದಾರೆ.