
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇಂದು 5041 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೊನಾ ಸೋಂಕು ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1000 ದೊಳಗೆ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ನಿನ್ನೆ 6835 ಜನರಿಗೆ ಸೋಂಕು ತಗಲಿದ್ದು, ಇಂದು 5041 ಜನರಿಗೆ ಸೋಂಕು ತಗುಲಿದೆ. ಇವತ್ತು ಪಾಸಿಟಿವಿಟಿ ದರ ಶೇಕಡ 3.8 ಕ್ಕೆ ಇಳಿಕೆಯಾಗಿದ್ದು, 115 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಎರಡು ತಿಂಗಳುಗಳಲ್ಲಿ ಮೊದಲ ಬಾರಿಗೆ ಕೋವಿಡ್ ಪ್ರಕರಣಗಳು 1000 ಕ್ಕಿಂತ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.