ಬೆಂಗಳೂರು: ರಾಜ್ಯದಲ್ಲಿ ಇಂದು 1210 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,99,011 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 16 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 11,928 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ 8,68,471 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 18,593 ಜನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 659 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,77,251 ಕ್ಕೆ ಏರಿಕೆಯಾಗಿದೆ. ಇವತ್ತು ಬೆಂಗಳೂರಿನಲ್ಲಿ 6 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 4224 ಮಂದಿ ಮೃತಪಟ್ಟಿದ್ದಾರೆ. 3,59,801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 13,225 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.