ಬೆಂಗಳೂರು: ರಾಜ್ಯದಲ್ಲಿ ನಾಲ್ಕು ತಿಂಗಳ ಬಳಿಕ ನಿನ್ನೆ 2000 ಕ್ಕಿಂತ ಕಡಿಮೆ ಕೊರೋನಾ ಪಾಸಿಟಿವ್ ಕೇಸ್ ದಾಖಲಾಗಿದೆ.
1963 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 19 ಮಂದಿ ಮೃತಪಟ್ಟಿದ್ದಾರೆ. 2686 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 8,48,850 ಕ್ಕೆ ಏರಿಕೆಯಾಗಿದೆ. ಇದುವರೆಗೆ 8,04,485 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 32,936 ಸಕ್ರಿಯ ಪ್ರಕರಣಗಳಿದ್ದು, 876 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 11,410 ಜನ ಮೃತಪಟ್ಟಿದ್ದಾರೆ.