
ಬೆಂಗಳೂರು: ಕೊರೋನಾ ಅತಂಕದ ನಡುವೆಯೂ ಪಿಯುಸಿ ಪೂರಕ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ.
ಆಗಸ್ಟ್ 19 ರಿಂದ ಸೆಪ್ಟಂಬರ್ 3 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, 18,4143 ಪೂರಕ ಪರೀಕ್ಷೆ ಬರೆಯಲಿದ್ದಾರೆ. 187 ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುವುದು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪರೀಕ್ಷೆ ನಡೆಸುವ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಲು ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.