alex Certify ಕೈಮೀರಿದ ಕೊರೋನಾ ತಡೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೈಮೀರಿದ ಕೊರೋನಾ ತಡೆಗೆ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ್ದು, ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹೆಚ್ಚು ಹಾಸಿಗೆ ಮೀಸಲಿಡಲು ಸೂಚಿಸಲಾಗಿದೆ.

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಹಾಸಿಗೆಗಳನ್ನು ಕೊರೊನಾಗೆ ಮೀಸಲಿಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಕೂಡ ಹಾಸಿಗೆ ಮೀಸಲಿಡದಿದ್ದರೆ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ನಿಯಂತ್ರಣ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 400 ಕ್ಕೂ ಹೆಚ್ಚು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಗೆ ನೀಡಿದೆ. ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯನ್ನು ಸಾರಿ ಹಾಗೂ ಐಎಲ್‍ಐ ಗೆ ಮೀಸಲಿಡಲು ತೀರ್ಮಾನಿಸಲಾಗಿದೆ. ವಿಕ್ಟೋರಿಯಾದಲ್ಲಿ 300 ಹಾಸಿಗೆ ಕೋವಿಡ್ ಮೀಸಲಿದ್ದು, ಎರಡು ದಿನದೊಳಗೆ 500 ಕ್ಕೆ ಏರಿಸಲು ಸೂಚಿಸಲಾಗಿದೆ. ಬೌರಿಂಗ್ ನಲ್ಲಿ 300 ಹಾಸಿಗೆ, ಚರಕ ಆಸ್ಪತ್ರೆಯಲ್ಲಿ ಎರಡು ದಿನದೊಳಗೆ 150 ಹಾಸಿಗೆ, ಘೋಷಾ ಆಸ್ಪತ್ರೆಯಲ್ಲಿ 100 ಹಾಸಿಗೆ, ಕೆ.ಸಿ.ಜನರಲ್ ನಲ್ಲಿ 100 ಹಾಸಿಗೆ ಕೋವಿಡ್ ಗೆ ಮೀಸಲಿಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳಿಗೆ ಸೂಚನೆ

ಕೋವಿಡ್ ಗೆ ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ. ಕಳೆದ 15 ದಿನಗಳಿಂದ ಕೋರುತ್ತಿದ್ದರೂ ಕೆಲವು ಆಸ್ಪತ್ರೆಗಳು 15-20% ಹಾಸಿಗೆ ಮಾತ್ರ ನೀಡಿವೆ. ಇನ್ನು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿದೆ. ಖಾಸಗಿ ಆಸ್ಪತ್ರೆಗಳು ಎಚ್ಚೆತ್ತುಕೊಳ್ಳದಿದ್ದರೆ, ಕಳೆದ ವರ್ಷದಂತೆಯೇ ಗಂಭೀರ ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನ್ ಕೋವಿಡ್ ರೋಗಿಗಳಲ್ಲಿ ತುರ್ತು ಇರುವವರಿಗೆ ಮಾತ್ರ ಚಿಕಿತ್ಸೆ ನೀಡಬೇಕು. ಕೋವಿಡ್ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗದಿದ್ದರೆ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ. ಆದರೂ ಈಗ ಖಾಸಗಿ ಆಸ್ಪತ್ರೆಗಳು ಸರ್ಕಾರದೊಂದಿಗೆ ನಿಲ್ಲಬೇಕು ಎಂದು ಮನವಿ ಮಾಡುತ್ತೇನೆ ಎಂದರು.

ಹೋಟೆಲ್ ಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಬೇಕು. ಕಾರ್ಪೊರೇಟ್ ಆಸ್ಪತ್ರೆಗಳು ಈ ವ್ಯವಸ್ಥೆ ಮಾಡಬೇಕು. ಗಂಭೀರ ರೋಗಿಗಳಿಗೆ ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು ಎಂದು ಸೂಚಿಸಲಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...