
ಬೆಂಗಳೂರು: ರಾಜ್ಯದಲ್ಲಿ ಇವತ್ತು ಸಾವಿನ ಸುನಾಮಿಯೇ ಎದ್ದಿದ್ದು, ಒಂದೇ ದಿನ 586 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇವತ್ತು 46 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 586 ಜನರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯಿಂದ ಕೆಲವೇ ಕ್ಷಣದಲ್ಲಿ ಮಾಹಿತಿ ಬಿಡುಗಡೆಯಾಗಲಿದೆ.