ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1791 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 8,65,931 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1947 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,29,188 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಚೇತರಿಕೆ ದರ ಶೇಕಡ 95.75 ರಷ್ಟು ಇದೆ. ರಾಜ್ಯದ ಕೋವಿಡ್ ಸಾವಿನ ಪ್ರಮಾಣ ಶೇಕಡ 1.33 ರಷ್ಟು ಇದೆ.