ಬೆಂಗಳೂರು: ಕಳೆದ ಬಾರಿ ಕೋವಿಡ್ ಸವಾಲಿನ ನಡುವ SSLC, PUC ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ವಿಭಿನ್ನ ಪರಿಸ್ಥಿತಿ ಇದೆ. ಪರೀಕ್ಷೆ ನಡೆಸಬೇಕೇ? ಬೇಡವೇ ಎನ್ನುವ ಗೊಂದಲವಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆ ಮಾಜಿ ಸಚಿವರು, ತಜ್ಞರು, ಶಾಸಕರೊಂದಿಗೆ ಚರ್ಚಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷವೂ SSLC, PUC ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮತ್ತೊಮ್ಮೆ ಪುನರ್ ವಿಮರ್ಶೆ ಮಾಡಲು ನಮ್ಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ ಇಲಾಖೆ ಸಂಬಂಧಿಸಿದ ಎಲ್ಲರೊಂದಿಗೆ ಚರ್ಚಿಸಿ ಎಲ್ಲರಿಗೂ ಸಮಾಧಾನ ಮಾಡಲು ಆಗಲ್ಲ. ಪರೀಕ್ಷೆ ಬೇಕು, ಬೇಡ ಎನ್ನುವ ವರ್ಗಗಳು ಇವೆ. ಯಾವುದೇ ನಿರ್ಧಾರದ ಹಿಂದೆ ಟೀಕೆ, ಅಸಮಾಧಾನ, ಟೀಕೆ ಸಹಜ, ಮಕ್ಕಳ ಸುರಕ್ಷತೆ, ಶೈಕ್ಷಣಿಕ ಭವಿಷ್ಯ ಗಮನದಲ್ಲಿಟ್ಟುಕೊಂಡು ಚಿಂತನೆ ನಡೆಸಲಾಗಿದೆ ಎಂದರು.
ಈಗ ಮೊದಲಿಗೆ ದ್ವಿತಿಯ ಪಿಯುಸಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ತೀರ್ಮಾನಿಸಲಾಗಿದೆ.