alex Certify BIG BREAKING: ಜೂ.23 ರಂದು ಸೆಕೆಂಡ್ ಪಿಯು ರಿಸಲ್ಟ್; ಜುಲೈನಲ್ಲಿ SSLC ಎಕ್ಸಾಂ –ಆಗಸ್ಟ್ ನಲ್ಲಿ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜೂ.23 ರಂದು ಸೆಕೆಂಡ್ ಪಿಯು ರಿಸಲ್ಟ್; ಜುಲೈನಲ್ಲಿ SSLC ಎಕ್ಸಾಂ –ಆಗಸ್ಟ್ ನಲ್ಲಿ ಫಲಿತಾಂಶ ಪ್ರಕಟ

ಬೆಂಗಳೂರು: ಜುಲೈ ಕೊನೆ ವಾರ ಇಲ್ಲವೇ ಆಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್ 23 ಇಲ್ಲವೇ 24 ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ದ್ವಿತಿಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದ ಅವರು, ದ್ವಿತಿಯ ಪಿಯುಸಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳ ಅಂಕಗಳ ಆಧಾರದ ಮೇಲೆ ಪಿಯು ಬೋರ್ಡ್ ಮಾನದಂಡದ ಆಧಾರದ ಮೇಲೆ ಎ ಪ್ಲಸ್, ಎ, ಬಿ, ಗ್ರೇಡ್ ಅನುಸಾರ ಪಾಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಫಲಿತಾಂಶದ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳು ಕೋವಿಡ್ ನಂತರ ಪರೀಕ್ಷೆ ಬರೆಯಬಹುದು, ಅವರಿಗಾಗಿ ಪರೀಕ್ಷೆ ನಡೆಸಲಾಗುವುದು. ಈಗಿನ ನಿರ್ಧಾರದಂತೆ ಎಲ್ಲಾ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗುವುದು. ಈ ವರ್ಷ ಸೆಕೆಂಡ್ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಎಸ್ಎಸ್ಎಲ್ಸಿ ಎರಡು ಪತ್ರಿಕೆಗಳ ಪರೀಕ್ಷೆ ನಡೆಯಲಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳ ಕೋರ್ ಸಬ್ಜೆಕ್ಟ್ ಪರೀಕ್ಷೆ. ಮಲ್ಟಿ ಚಾಯ್ಸ್ ಪ್ರಶ್ನೆಗಳ ಮಾದರಿಯಲ್ಲಿ ಸರಳವಾಗಿ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆಗಳು ಸರಳವಾಗಿರುತ್ತವೆ. ಇನ್ನೊಂದು ಪತ್ರಿಕೆ ಭಾಷೆ ಪರೀಕ್ಷೆ ನಡೆಯಲಿದೆ. ಮಕ್ಕಳನ್ನು ಫೇಲ್ ಮಾಡಲು ಪರೀಕ್ಷೆ ಮಾಡುತ್ತಿಲ್ಲ. ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಠಿಯಿಂದ ಪರೀಕ್ಷೆ ಮಾಡಲಾಗುವುದು. ಯಾರನ್ನೂ ಫೇಲ್ ಮಾಡಲ್ಲ. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು. ಪ್ರೌಢಶಿಕ್ಷಣ ಮಂಡಳಿ ಮಾರ್ಗಸೂಚಿ ನೀಡಲಿದೆ ಎಂದು ಹೇಳಿದ್ದಾರೆ.

ನಾವು ಜುಲೈ ಮೂರನೇ ವಾರ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆಗೆ 10 ದಿನ ಮೊದಲು ದಿನಾಂಕ ಪ್ರಕಟಿಸಲಾಗುವುದು. ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಮತ್ತೊಮ್ಮೆ ಫ್ರೆಷರ್ಸ್ ರೀತಿಯಲ್ಲಿ ಪರೀಕ್ಷೆ ನಡೆಯಲಿದೆ. 6 ಸಾವಿರ ಪರಿಕ್ಷಾ ಕೇಂದ್ರಗಳಲ್ಲಿ 1 ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ ಕೂರಿಸಿ ಪರೀಕ್ಷೆ ನಡೆಸಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಸರಳ ಪ್ರಶ್ನೆಗಳೊಂದಿಗೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜುಲೈ ಕೊನೆ ವಾರ, ಆಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತಿಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್ 23 ಇಲ್ಲವೇ 24 ರಂದು ಪ್ರಕಟಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...