ಬಾಗಲಕೋಟೆ: ಒಮಿಕ್ರಾನ್ ಆತಂಕದ ಹೊತ್ತಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಿರುವ ಸರ್ಕಾರ ಎಲ್ಲ ವಯಸ್ಕರಿಗೆ ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡಿದೆ. ಹೀಗಿದ್ದರೂ ಅನೇಕರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ಇನ್ನು ಮುಂದೆ ದಿನಸಿ ಖರೀದಿಸಲು ಕೂಡ 2 ಡೋಸ್ ಕೊರೋನಾ ಲಸಿಕೆ ಪಡೆದಿರುವುದನ್ನು ಖಚಿತಪಡಿಸಬೇಕಿದೆ. ಬಾಗಲಕೋಟೆ ಜಿಲ್ಲಾಧಿಕಾರಿ ಮಾರ್ಗಸೂಚಿ ಪ್ರಕಟಿಸಿದ್ದು, ಜಿಲ್ಲೆಯ ಎಲ್ಲಾ ವ್ಯಾಪಾರಸ್ಥರು ಅಂಗಡಿಗಳಿಗೆ ಬರುವ ಗ್ರಾಹಕರಿಗೆ ಎರಡು ಡೋಸ್ ಲಸಿಕೆ ಪಡೆದಿದ್ದಾರೆಯೇ, ಇಲ್ಲವೇ ಎನ್ನುವುದನ್ನು ಪರಿಶೀಲಿಸಬೇಕೆಂದು ಸೂಚಿಸಲಾಗಿದೆ. ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿಯೂ ಸೋಮಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ.