ಬೆಂಗಳೂರು: ಕೊರೋನಾ ತಡೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತಾ ಸಭೆ ನಡೆಸಿದೆ. ಮೊದಲ ಹಂತದಲ್ಲಿ ಕೊರೋನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಲಾಗುವುದು.
ಸರ್ಕಾರಿ ಆಸ್ಪತ್ರೆಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರಮುಖರೊಂದಿಗೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಲಸಿಕೆ ವಿಚಾರವಾಗಿ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ಸ್ಟೋರೇಜ್ ಬಗ್ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮೊದಲ ಹಂತದಲ್ಲಿ ಸುಮಾರು 84,000 ಜನರಿಗೆ ವ್ಯಾಕ್ಸಿನ್ ನೀಡಲಾಗುವುದು ಎನ್ನಲಾಗಿದ್ದು, ಸರ್ಕಾರಿ ಆಸ್ಪತ್ರೆ, ಬಿಬಿಎಂಪಿ ಆಸ್ಪತ್ರೆಗಳ 8000 ಸಿಬ್ಬಂದಿಗೆ, ಡೆಂಟಲ್, ಮೆಡಿಕಲ್, ಪ್ಯಾರಾಮೆಡಿಕಲ್ ಸಿಬ್ಬಂದಿ ಸೇರಿ 74,000 ಸಿಬ್ಬಂದಿಗೆ ಕೊರೋನಾ ವ್ಯಾಕ್ಸಿನ್ ನೀಡಲು ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.