alex Certify ಸಚಿವ ಬಿ.ಸಿ. ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಬಿ.ಸಿ. ಪಾಟೀಲ್ ಮನೆಗೆ ಹೋಗಿ ಲಸಿಕೆ ನೀಡಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಹಾವೇರಿ: ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಆರೋಗ್ಯ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ಅಮಾನತು ಆದೇಶ ಹೊರಡಿಸಿದ್ದಾರೆ. ಮಾರ್ಚ್ 2 ರಂದು ಹಿರೇಕೆರೂರಿನಲ್ಲಿ ಬಿ.ಸಿ. ಪಾಟೀಲ್ ನಿವಾಸಕ್ಕೆ ತೆರಳಿ ಲಸಿಕೆ ನೀಡಲಾಗಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆ ನಡೆದಿತ್ತು.

ಕಡ್ಡಾಯವಾಗಿ ಕೋವಿಡ್ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆದುಕೊಳ್ಳುವಂತೆ ಸೂಚಿಸಿದರೂ, ಸಚಿವರು ಮನೆಯಲ್ಲಿ ಲಸಿಕೆ ಪಡೆಯುವ ಮೂಲಕ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಮಕಾನದಾರ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...