ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗತೊಡಗಿದೆ. ಇದೇ ಸಂದರ್ಭದಲ್ಲಿ ಸುಮಾರು 4 ಕೋಟಿ ಅರ್ಹರು ಕೊರೋನಾ ಲಸಿಕೆಯ ಒಂದೇ ಒಂದು ಡೋಸ್ ಕೂಡ ಪಡೆದುಕೊಂಡಿಲ್ಲ ಎನ್ನುವ ಮಾಹಿತಿ ಹೊರಬಿದ್ದಿದೆ.
ಶೇಕಡ 90 ರಷ್ಟು ಜನ ಎರಡು ಡೋಸ್ ಪಡೆದುಕೊಂಡಿದ್ದಾರೆ. ಶೇಕಡ 98 ರಷ್ಟು ಜನ ಮೊದಲ ಡೋಸ್ ಪಡೆದುಕೊಂಡಿದ್ದಾರೆ. ಸುಮಾರು 4 ಕೋಟಿ ಅರ್ಹ ಜನ ಲಸಿಕೆಯ ಒಂದು ಡೋಸ್ ಕೂಡ ಪಡೆದುಕೊಂಡಿಲ್ಲ ಎಂದು ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಆರೋಗ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್ ಉತ್ತರಿಸಿದ್ದಾರೆ.
ಜುಲೈ 18 ರವರೆಗೆ 178 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗಿದೆ. ದೇಶದ ಜನಸಂಖ್ಯೆಯ ಶೇಕಡ 98 ರಷ್ಟು ಜನ ಒಂದು ಡೋಸ್ ಮತ್ತು 90 ರಷ್ಟು ಜನ ಎರಡು ಡೋಸ್ ಗಳನ್ನು ಪಡೆದುಕೊಂಡಿದ್ದಾರೆ. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ 75 ದಿನಗಳ ಕಾಲ ಉಚಿತವಾಗಿ ಬೂಸ್ಟರ್ ಡೋಸ್ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.