
ನವದೆಹಲಿ: ಮಾರ್ಚ್ 1 ರಿಂದ 60 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲಾಗುವುದು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆ ನೀಡಲಾಗುವುದು.
ಅದೇ ರೀತಿ 45 ವರ್ಷ ಮೇಲ್ಪಟ್ಟವರು ಮತ್ತು ಬೇರೆ ಕಾಯಿಲೆಯವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು. ದೇಶದ 10,000 ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಹಣ ನೀಡಿ ಲಸಿಕೆ ಪಡೆಯಬೇಕಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಲಸಿಕೆ ನೀಡಲು ಒಪ್ಪಿಗೆ ಸೂಚಿಸಲಾಗಿದೆ.
ಎಲ್ಲಾ ಕೇಂದ್ರ ಸಚಿವರು ಕೊರೋನಾ ಲಸಿಕೆಯನ್ನು ಹಣ ಪಾವತಿಸಿ ಪಡೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಮಾಹಿತಿ ನೀಡಿದ್ದಾರೆ.
ಮಾರ್ಚ್ 1 ರಿಂದ ಹಿರಿಯ ನಾಗರಿಕರು ಹಾಗೂ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಉಚಿತವಾಗಿ ಲಭ್ಯವಾಗಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ನಿಗದಿತ ದರ ನೀಡಿ ಲಸಿಕೆ ಪಡೆಯಬಹುದಾಗಿದೆ ಎಂದು ಹೇಳಲಾಗಿದೆ.