ಬೆಂಗಳೂರು: ಶಾಲೆಗಳು, ಆರೋಗ್ಯ ಕೇಂದ್ರಗಳಲ್ಲಿ ಕೊರೋನಾ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ. ಆಸ್ಪತ್ರೆಗಳಲ್ಲಿ ಜನಜಂಗುಳಿ ತಪ್ಪಿಸುವ ಉದ್ದೇಶದಿಂದ ಮತ್ತು ಆಸ್ಪತ್ರೆಗಳಲ್ಲಿ ಸೋಂಕು ಹರಡುವುದನ್ನು ತಪ್ಪಿಸಲು ಶಾಲೆ-ಕಾಲೇಜು ಹಾಗೂ ಮೈದಾನಗಳಲ್ಲಿ ಕೊರೋನಾ ಲಸಿಕೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಗ್ರಾಮೀಣ ಪ್ರದೇಶಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ತೀರ್ಮಾನಿಸಲಾಗಿದೆ. ವಿಧಾನಸೌಧದಲ್ಲಿ ನಡೆದ ಕೋವಿಡ್ ಕಾರ್ಯ ಪಡೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ನಂತರ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿ, ಶಾಲೆ, ಕಾಲೇಜ್ ಕಟ್ಟಡ, ಮೈದಾನ, ಕ್ರೀಡಾಂಗಣ ಮೊದಲಾದ ಕಡೆಗಳಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಆಸ್ಪತ್ರೆಗಳಲ್ಲಿ ಲಸಿಕೆ ನೀಡುತ್ತಿರುವುದರಿಂದ ಜನ ಜನ ಜಾಸ್ತಿಯಾಗಿ ಸೋಂಕು ಹರಡುವ ಅಪಾಯವಿದೆ. ಹೀಗಾಗಿ ಕ್ರಮ ಬೇರೆ ಕಡೆ ಲಸಿಕೆ ನೀಡಲು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.