ಬೆಂಗಳೂರು: 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಇಂದಿನಿಂದ 45 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗುತ್ತದೆ ಎನ್ನಲಾಗಿದೆ.
ಕೋವಿಶೀಲ್ಡ್ ಮೊದಲ ಡೋಸ್ ಪಡೆದು 84 ದಿನ ಆದವರಿಗೆ ಮಾತ್ರ ಎರಡನೇ ಡೋಸ್ ನೀಡಲಾಗುವುದು. ರಾಜ್ಯದಲ್ಲಿ ಲಸಿಕೆ ಪ್ರಮಾಣ ಕಡಿಮೆ ಇರುವ ಕಾರಣ 45 ವರ್ಷ ಮೇಲ್ಪಟ್ಟವರಿಗೆ 2 ಡೋಸ್ ನೀಡಲು ತಿಳಿಸಲಾಗಿತ್ತು. ಮೊದಲ ಡೋಸ್ ಪಡೆಯುವವರಿಗೆ ಕಾಯುವಂತಾಗಿತ್ತು. ಕೋವಿಶೀಲ್ಡ್ ಲಸಿಕೆ ಮೊದಲ ಮತ್ತು ಎರಡನೇ ಡೋಸ್ ಪಡೆಯುವ ಅಂತರವನ್ನು 12 ವಾರಗಳಿಗೆ ಹೆಚ್ಚಿಸಿರುವ ಕಾರಣ ಎರಡನೇ ಡೋಸ್ ಮೇಲಿನ ಒತ್ತಡ ಕಡಿಮೆಯಾಗಿದೆ.
ಹೀಗಾಗಿ 45 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಡೋಸ್ ನೀಡಲಾಗುತ್ತದೆ. ಕೃಷಿ ಇಲಾಖೆ, ಅಂಚೆ ಇಲಾಖೆ, ಬ್ಯಾಂಕ್, ಡೆಲಿವರಿ ಬಾಯ್ಸ್ ಮೊದಲಾದ ಅತ್ಯಗತ್ಯ ಸೇವಾವಲಯದ ಸಿಬ್ಬಂದಿಗೆ ನೀಡಲಾಗುತ್ತದೆ. ನಂತರ ನೋಡಿಕೊಂಡು 18 ರಿಂದ 44 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಹೇಳಲಾಗಿದೆ.