alex Certify ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಎಲ್ಲರಿಗೂ ಲಸಿಕೆ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಎಲ್ಲರಿಗೂ ಲಸಿಕೆ..?

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೆಯ ಆತಂಕದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಮತ್ತಷ್ಟು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಎಲ್ಲರಿಗೂ ಲಸಿಕೆ ನೀಡಲು ಚಿಂತನೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಈ ಬಗ್ಗೆ ಸುಳಿವು ನೀಡಿದ್ದು, ಶೀಘ್ರವೇ ಆದೇಶ ಹೊರಡಿಸುವ ಸಾಧ್ಯತೆ ಇದೆ.

60 ವರ್ಷ ಮೇಲ್ಪಟ್ಟವರು ಮತ್ತು 45 ವರ್ಷ ಮೇಲ್ಪಟ್ಟ ಆರೋಗ್ಯ ಸಮಸ್ಯೆ ಇರುವವರಿಗೆ ಲಸಿಕೆ ನೀಡುತ್ತಿದ್ದು, ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಇದರೊಂದಿಗೆ 45 ವರ್ಷ ಒಳಗಿನವರೆಗೂ ಕೂಡ ಲಸಿಕೆ ಪಡೆಯುವ ಅವಕಾಶ ಕಲ್ಪಿಸಲು ಆರೋಗ್ಯ ಮಂತ್ರಾಲಯ ಚಿಂತನೆ ನಡೆಸಿದೆ.

ಸಚಿವ ಹರ್ಷವರ್ಧನ್ ಈ ಬಗ್ಗೆ ಮಾತನಾಡಿ, ಕೊರೋನಾ ನಿರೋಧಕ ಲಸಿಕೆ ಬಗ್ಗೆ ಜನರಲ್ಲಿ ವಿಶ್ವಾಸ ಹೆಚ್ಚಾಗುತ್ತಿದ್ದು, 4 ದಿನದಲ್ಲಿ ಒಂದು ಕೋಟಿಗೂ ಅಧಿಕ ಜನ ಲಸಿಕೆ ಮೊದಲ ಡೋಸ್ ಪಡೆಯಲಿದ್ದಾರೆ.ಎಲ್ಲ ವಯಸ್ಸಿನವರಿಗೂ ಲಸಿಕೆ ನೀಡುವ ಅವಕಾಶ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...