ನವದೆಹಲಿ: ಕೊರೋನಾ ಲಸಿಕೆ ಕೊವ್ಯಾಕ್ಸಿನ್ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ತಿಳಿಸಿದೆ.
ಭಾರತ್ ಬಯೋಟೆಕ್ ಮತ್ತು ಐಸಿಎಂಆರ್ ಅಭಿವೃದ್ಧಿಪಡಿಸಿದ ಕೊರೋನಾ ಲಸಿಕೆ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಮೊದಲ ಹಂತದ ಪ್ರಯೋಗದಲ್ಲಿ ಲಸಿಕೆ ಪರಿಣಾಮಕಾರಿಯಾಗಿದೆ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಇದು ಪರಿಣಾಮಕಾರಿಯಾಗಿದ್ದು ಕೊವ್ಯಾಕ್ಸಿನ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ. ಲಸಿಕೆಯನ್ನು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಲ್ಲಿ ಸಂಗ್ರಹಿಸಬಹುದು. ಲಸಿಕೆಯ ಪ್ರಯೋಗ ಮೂರನೇ ಹಂತದಲ್ಲಿದೆ. 26000 ಸ್ವಯಂಸೇವಕರ ಮೇಲೆ ಮೂರನೇ ಹಂತದ ಪ್ರಯೋಗ ಮಾಡಿದ್ದು ರಿಸಲ್ಟ್ ಶೀಘ್ರದಲ್ಲೇ ಬರಲಿದೆ ಎಂದು ಹೇಳಲಾಗಿದೆ.