ಬೆಂಗಳೂರು: ಕರ್ನಾಟಕ ಇಂದು 8 ಕೋಟಿ ಡೋಸ್ ಗಳನ್ನು ಪೂರ್ಣಗೊಳಿಸುವ ಮೂಲಕ ಪ್ರಮುಖ ಮೈಲಿಗಲ್ಲು ದಾಟಿದೆ.
ಮೊದಲ ಡೋಸ್ ನೀಡಿಕೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲನೇ ಸ್ಥಾನದಲ್ಲಿದೆ. ಎರಡನೇ ಡೋಸ್ ನೀಡಿಕೆಯಲ್ಲಿ ಮೂರನೇ ಸ್ಥಾನದಲ್ಲಿದೆ. ಇದಕ್ಕಾಗಿ ಶ್ರಮಿಸಿದ, ಸಹಕರಿಸಿದ ಆರೋಗ್ಯ ಕಾರ್ಯಕರ್ತರು, ಜಿಲ್ಲಾಡಳಿತಗಳ ಸಂಪೂರ್ಣ ಕುಟುಂಬಕ್ಕೆ ಅಭಿನಂದನೆಗಳು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.