ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಕೈಗೊಂಡಿದ್ದ ಬೃಹತ್ ಲಸಿಕೆ ಅಭಿಯಾನದಲ್ಲಿ ಬರೋಬ್ಬರಿ 2.22 ಡೋಸ್ ಲಸಿಕೆ ನೀಡಲಾಗಿದೆ. ಈ ಮೂಲಕ ಲಸಿಕೆ ನೀಡಿಕೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ.
ದೇಶಾದ್ಯಂತ ಶುಕ್ರವಾರ ಒಂದೇ ದಿನ 2.22 ಕೋಟಿಗೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಇದರೊಂದಿಗೆ 79.13 ಕೋಟಿಗೂ ಅಧಿಕ ಲಸಿಕೆ ನೀಡಲಾಗಿದೆ. ಲಸಿಕೆ ನೀಡಿಕೆಯಲ್ಲಿ ಹೊಸ ದಾಖಲೆ ಬರೆಯಲಾಗಿದ್ದು. ಪ್ರಧಾನಿ ಮೋದಿಯವರಿಗೆ ಜನ್ಮದಿನದ ಅಂಗವಾಗಿ ಆರೋಗ್ಯ ಕಾರ್ಯಕರ್ತರು ಹೊಸ ದಾಖಲೆಯ ಉಡುಗೊರೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಹೇಳಿದ್ದಾರೆ.