ಬೆಂಗಳೂರು: ಕೊರೋನಾ ಲಸಿಕೆ ವಿತರಣೆಗೆ ಕೇಂದ್ರೀಕೃತ ವ್ಯವಸ್ಥೆ ಜಾರಿಗೊಳಿಸುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿರುವುದನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ.
ದೇಶದಲ್ಲಿ ಉತ್ಪಾದನೆಯಾಗುವ ಶೇಕಡ 75 ರಷ್ಟು ಲಸಿಕೆಯನ್ನು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರವೇ ಪೂರೈಕೆ ಮಾಡುವುದು ಸ್ವಾಗತಾರ್ಹವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಸೇವಾ ಶುಲ್ಕವನ್ನು 150 ರೂ. ನಿಗದಿ ಮಾಡಿದ್ದು, ಇದರಿಂದ ಲಸಿಕೆ ಅಭಿಯಾನ ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟದಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ದೀಪಾವಳಿವರೆಗೆ ಉಚಿತವಾಗಿ ಪಡಿತರ ವಿತರಿಸುವುದು ಶ್ಲಾಘನೀಯ ಎಂದು ತಿಳಿಸಿದ್ದಾರೆ.