alex Certify ಲಸಿಕೆ ವಿತರಣೆ ಬಗ್ಗೆ ಸಚಿವರಿಂದ ಭರ್ಜರಿ ಸಿಹಿ ಸುದ್ದಿ: ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ವಿತರಣೆ ಬಗ್ಗೆ ಸಚಿವರಿಂದ ಭರ್ಜರಿ ಸಿಹಿ ಸುದ್ದಿ: ಮೇ 10 ರಿಂದ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್

ಬೆಂಗಳೂರು: ಮೇ 10ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕಾ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ ಆರೋಗ್ಯ ಸೇತು ಆಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕಾ ಕೇಂದ್ರಕ್ಕೆ ಬರುವವರಿಗೆ ಅವಕಾಶವಿರುವುದಿಲ್ಲ ಎಂದು ಹೇಳಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ದವಾಗಿದ್ದು, ಆಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದೆ. ಆದ್ದರಿಂದ ಎಲ್ಲ ನಾಗರೀಕರು, ವಿಶೇಷವಾಗಿ ಯುವಕರಿಗೆ ನನ್ನ ಮನವಿಯಾಗಿದ್ದು, ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...