
ಬೆಂಗಳೂರು: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 94 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ರಾಜ್ಯದಲ್ಲಿ 436 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 3.96 ರಷ್ಟು ಇದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿ ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ.