
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದೆ.
11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಂದ ಇಂದು ಸಾವಿನ ಪ್ರಕರಣ ವರದಿಯಾಗಿಲ್ಲ. ಪಾಸಿಟಿವಿಟಿ ದರ ಶೇಕಡ 1.6 ರಷ್ಟು ಇದೆ.
ಕೇರಳ ಸೇರಿ ದೇಶದ ಅನೇಕ ರಾಜ್ಯಗಳಲ್ಲಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.