ಬೆಂಗಳೂರು: ನಾಳೆ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ವಿಡಿಯೋ ಕಾನ್ಫರೆನ್ಸ್ ನಲ್ಲಿ ವರ್ಚುಯಲ್ ಸಭೆ ನಡೆಸಲಿದ್ದಾರೆ.
ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ಅಧೀಕ್ಷಕರು, ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಜಿಲ್ಲಾ ಸರ್ಜನ್ ಗಳು, ಸರ್ಕಾರಿ ವೈದ್ಯಕೀಯ ಕಾಲೇಜುಗಳ ಡೀನ್ ಗಳ ಜೊತೆ ಸಿಎಂ ಸಮಾಲೋಚನೆ ನಡೆಸಲಿದ್ದಾರೆ.
ಸಭೆಯಲ್ಲಿ ಜಿಲ್ಲೆಗಳ ಕೊರೋನಾ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದು ಮತ್ತಷ್ಟು ಕ್ರಮಕೈಗೊಳ್ಳುವ ಕುರಿತು ಸೂಚನೆ ನೀಡಲಿದ್ದಾರೆ.