
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1001 ಜನರಿಗೆ ಕೊರೋನಾ ಸೋಂಕು ತಗುಲಿದ್ದು 1780 ಸೋಂಕಿತರು ಗುಣಮುಖರಾಗಿದ್ದಾರೆ. 18 ಜನ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ 12,634 ಸಕ್ರಿಯ ಪ್ರಕರಣಗಳು ಇವೆ. ಇಂದು 70,290 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 1.42 ರಷ್ಟು ಇದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ 500 ಕ್ಕಿಂತ ಕಡಿಮೆಯಾಗಿದ್ದು, ಇವತ್ತು 485 ಜನರಿಗೆ ಸೋಂಕು ತಗುಲಿದೆ. 12 ಜನ ಸೋಂಕಿತರು ಮೃತಪಟ್ಟಿದ್ದಾರೆ. 6000ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇವೆ.