alex Certify BREAKING: ಮೈಸೂರು, ಹಾಸನ ಸೇರಿ ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ; 2.17 ಲಕ್ಷ ಸಕ್ರಿಯ ಕೇಸ್, 27156 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೈಸೂರು, ಹಾಸನ ಸೇರಿ ರಾಜ್ಯದಲ್ಲಿಂದು ಕೊರೋನಾ ಮಹಾಸ್ಪೋಟ; 2.17 ಲಕ್ಷ ಸಕ್ರಿಯ ಕೇಸ್, 27156 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 27,156 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 14 ಜನ ಸೋಂಕಿತರು ಮೃತಪಟ್ಟಿದ್ದಾರೆ. 7827 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 32,47,243 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,445 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,91,472 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,17,297 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 12.45 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 15,947 ಜನರಿಗೆ ಸೋಂಕು ತಗುಲಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 4888 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,57,254 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಳ್ಳಾರಿ 560, ಬೆಂಗಳೂರು ಗ್ರಾಮಾಂತರ 538, ದಕ್ಷಿಣಕನ್ನಡ 490, ಧಾರವಾಡ 784, ಹಾಸನ 1050, ಮಂಡ್ಯ 917, ಮೈಸೂರು 1770, ತುಮಕೂರು 1147 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಬೆಂಗಳೂರು ನಗರ 5, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ದಕ್ಷಿಣ ಕನ್ನಡ 3, ಧಾರವಾಡ 1, ಕಲ್ಬುರ್ಗಿ 1, ರಾಮನಗರ 1, ತುಮಕೂರು 1 ಸೇರಿ 14 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...