alex Certify BREAKING NEWS: ರಾಜ್ಯದಲ್ಲಿ 14950 ಜನರಿಗೆ ಸೋಂಕು, 53 ಮಂದಿ ಸಾವು; ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿ 14950 ಜನರಿಗೆ ಸೋಂಕು, 53 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 14,950 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 53 ಜನ ಸೋಂಕಿತರು ಮೃತಪಟ್ಟಿದ್ದಾರೆ. 40,599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 38,75,724 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39,250 ಸೋಂಕಿತರು ಮೃತಪಟ್ಟಿದ್ದಾರೆ. 37,13,343 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 1,23,098 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 10.93 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು 6039 ಜನರಿಗೆ ಕೊರೋನಾ ಸೋಂಕು ತಗುಲಿದೆ. 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 25,904 ಜನ ಗುಣಮುಖರಾಗಿದ್ದಾರೆ. 51,645 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 1018, ಹಾಸನ 560, ಮಂಡ್ಯ 488, ಮೈಸೂರು 944, ಶಿವಮೊಗ್ಗ 543, ತುಮಕೂರು 656 ಜನರಿಗೆ ಕೊರೋನಾ ಸೋಂಕು ತಗುಲಿದೆ.

ಬೆಳಗಾವಿ 3, ಬೆಂಗಳೂರು ನಗರ 15, ದಕ್ಷಿಣ ಕನ್ನಡ 4, ಮೈಸೂರು 10, ಶಿವಮೊಗ್ಗ 3 ಸೇರಿ ರಾಜ್ಯದಲ್ಲಿ 53 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...