ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಬರೋಬ್ಬರಿ 12 ಸಾವಿರ ಜನರಿಗೆ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 9020 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಜ್ಯದಲ್ಲಿ ಇಂದು 901 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 6.33 ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಬರೋಬ್ಬರಿ 49,602 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 40 ಸಾವಿರಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಬ್ಬರು ಸೇರಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 1,89,499 ಪರೀಕ್ಷೆ ನಡೆಸಲಾಗಿದೆ.