alex Certify BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 12,000 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,51,958 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 901 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,63,957 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 49,602 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 6.33 ರಷ್ಟಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 38,370 ಜನ ಸಾವನ್ನಪ್ಪಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 9020 ಜನರಿಗೆ ಸೋಂಕು ತಗುಲಿದೆ. ಇಬ್ಬರು ಮೃತಪಟ್ಟಿದ್ದಾರೆ. 605 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 40,570 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ 107, ಬೆಳಗಾವಿ 105, ಬೆಂಗಳೂರು ಗ್ರಾಮಾಂತರ 98, ಬೆಂಗಳೂರು ನಗರ 9020, ದಕ್ಷಿಣಕನ್ನಡ 298, ಧಾರವಾಡ 147, ಹಾಸನ 182, ಕಲಬುರ್ಗಿ 98, ಮಂಡ್ಯ 261, ಮೈಸೂರು 398, ಶಿವಮೊಗ್ಗ 198, ತುಮಕೂರು 190, ಉಡುಪಿ 340, ಉತ್ತರಕನ್ನಡ 94 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 2, ದಕ್ಷಿಣಕನ್ನಡ 1, ಬಳ್ಳಾರಿ 1 ಸೇರಿ ರಾಜ್ಯದಲ್ಲಿ ನಾಲ್ವರು ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...