ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1785 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 1.10 ರಷ್ಟು ಇದೆ. ಇವತ್ತು 1651 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 25 ಸೋಂಕಿತರು ಸಾವನ್ನಪ್ಪಿದ್ದಾರೆ. 24 414 ಸಕ್ರಿಯ ಪ್ರಕರಣಗಳು ಇವೆ. 1,61,662 ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 414 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. 554 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. 8560 ಸಕ್ರಿಯ ಪ್ರಕರಣಗಳಿವೆ.