alex Certify BIG NEWS: 13 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 13 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 236 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,00,671 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 38,268 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು 321 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,55,138 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 7236 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.29 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 121 ಜನರಿಗೆ ಸೋಂಕು ತಗುಲಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 188 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5531 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಕೇಸ್ ವರದಿಯಾಗಿಲ್ಲ.

ಬೆಂಗಳೂರು ನಗರ 121, ದಕ್ಷಿಣಕನ್ನಡ 19, ಹಾಸನ 10, ಕೊಡಗು 35, ಮೈಸೂರು 13 ಹೊಸ ಪ್ರಕರಣ ವರದಿಯಾಗಿದೆ. ಬೆಂಗಳೂರು 4, ಕೋಲಾರ, ಬಳ್ಳಾರಿ, ಬೆಳಗಾವಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...