ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 589 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 887 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
13 ಸೋಂಕಿತರು ಸಾವನ್ನಪ್ಪಿದ್ದಾರೆ. 12,469 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,26,932 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.46 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ 221 ಜನರಿಗೆ ಸೋಂಕು ತಗುಲಿದ್ದು, 5 ಜನ ಸಾವನ್ನಪ್ಪಿದ್ದಾರೆ. 7,627 ಸಕ್ರಿಯ ಪ್ರಕರಣಗಳಿವೆ. 212 ಜನ ಗುಣಮುಖರಾಗಿದ್ದಾರೆ.