alex Certify BREAKING: ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಸೋಂಕು, 9 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 328 ಜನರಿಗೆ ಕೊರೋನಾ ಸೋಂಕು, 9 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 328 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 247 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,90,856 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,44,669 ಜನ ಗುಣಮುಖರಾಗಿದ್ದಾರೆ. 38,131 ಜನ ಸೋಂಕಿತರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ಇದರ ಶೇಕಡ 0.27 ರಷ್ಟು ಇದೆ. 8027 ಸಕ್ರಿಯ ಪ್ರಕರಣಗಳು ಇವೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 176 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಐದು ಜನ ಮೃತಪಟ್ಟಿದ್ದಾರೆ. 102 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6567 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 176, ಚಿಕ್ಕಮಗಳೂರು 14, ದಕ್ಷಿಣ ಕನ್ನಡ 13, ಹಾಸನ 29, ಮೈಸೂರು 15, ಶಿವಮೊಗ್ಗ 11, ಉತ್ತರಕನ್ನಡ 10 ಹೊಸ ಪ್ರಕರಣ ವರದಿಯಾಗಿದೆ.

ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 5, ದಕ್ಷಿಣಕನ್ನಡ 2, ರಾಮನಗರ 1 ಸೇರಿ ರಾಜ್ಯದಲ್ಲಿ 9 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...