alex Certify ರಾಜ್ಯದಲ್ಲಿಂದು 317 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 317 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 317 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,01,251 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,277 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇವತ್ತು 301 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,55,766 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7179 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 205 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 139 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5570 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 205, ದಕ್ಷಿಣಕನ್ನಡ 16, ಹಾಸನ 21, ಕೊಡಗು 20 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸೋಂಕಿತರು ಮೃತಪಟ್ಟ ಬಗ್ಗೆ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...