alex Certify BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 34 ಸಾವಿರ ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 34 ಸಾವಿರ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 34,047 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 13 ಜನ ಸೋಂಕಿತರು ಮೃತಪಟ್ಟಿದ್ದಾರೆ. 5902 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ 32,20,087 ಜನರಿಗೆ ಕೊರೊನಾ ಸೋಂಕು ತಗುಲಿದೆ. 38,431 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,83,645 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 1,97,982 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 19.29 ರಷ್ಟು ಏರಿಕೆ ಕಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 21,071 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 3978 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,46,200 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ

ಬೆಂಗಳೂರು ಗ್ರಾಮಾಂತರ 722, ಬಳ್ಳಾರಿ 566, ದಕ್ಷಿಣಕನ್ನಡ 782, ಧಾರವಾಡ 634, ಹಾಸನ 1121, ಕಲಬುರ್ಗಿ 562, ಕೋಲಾರ 552, ಮಂಡ್ಯ 709, ಮೈಸೂರು 1892, ತುಮಕೂರು 1323, ಉಡುಪಿ 591 ಜನರಿಗೆ ಹೊಸದಾಗಿ ಸೋಂಕು ತಗುಲಿದೆ.

ಬೆಂಗಳೂರು 5, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 2, ಹಾಸನ 1, ಕಲಬುರ್ಗಿ 1, ಮಂಡ್ಯ 1, ಮೈಸೂರು 1, ರಾಮನಗರ 1 ಸೇರಿ ರಾಜ್ಯದಲ್ಲಿ 13 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...