alex Certify BIG NEWS: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ, ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ಮತ್ತಷ್ಟು ಇಳಿಕೆ, ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೋರೋನಾ ಮತ್ತಷ್ಟು ಇಳಿಮುಖವಾಗಿದ್ದು, 6151 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 49 ಜನ ಸೋಂಕಿತರು ಮೃತಪಟ್ಟಿದ್ದಾರೆ. 16,802 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,02,309 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,396 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 37,75,799 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 87,080 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 6.19 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 2718 ಜನರಿಗೆ ಸೋಂಕು ತಗುಲಿದ್ದು, 15 ಜನ ಸೋಂಕಿತರು ಮೃತಪಟ್ಟಿದ್ದಾರೆ. 6726 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 35,631 ಸಕ್ರಿಯ ಪ್ರಕರಣಗಳು ಇವೆ.

ಬೆಳಗಾವಿ 321, ಹಾಸನ 219, ಮೈಸೂರು 285, ತುಮಕೂರು 210 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 15, ಬೆಳಗಾವಿ 2, ದಕ್ಷಿಣ ಕನ್ನಡ 3, ಹಾಸನ 2, ಮೈಸೂರು 6, ತುಮಕೂರು 4, ಉಡುಪಿ 4, ಉತ್ತರ ಕನ್ನಡ 2 ಸೇರಿ ರಾಜ್ಯದಲ್ಲಿ 49 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...