alex Certify BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ ಶೇಕಡ 0.96 ರಷ್ಟು ಇದೆ. ಇವತ್ತು 1383 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 25 ಸೋಂಕಿತರು ಮೃತಪಟ್ಟಿದ್ದಾರೆ. 24,021 ಸಕ್ರಿಯ ಪ್ರಕರಣಗಳಿದ್ದು, ಇವತ್ತು 1,33,030 ಪರೀಕ್ಷೆ ನಡೆಸಲಾಗಿದೆ.

ಇಂದು ಹೊಸದಾಗಿ 1285 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,08,284 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,612 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 28,47,627 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 290 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ. 168 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 8670 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 6, ಬಳ್ಳಾರಿ 4, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 13, ಬೆಂಗಳೂರು ನಗರ 290, ಬೀದರ್ 3, ಚಾಮರಾಜನಗರ 17, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 36, ಚಿತ್ರದುರ್ಗ 18, ದಕ್ಷಿಣ ಕನ್ನಡ 219, ದಾವಣಗೆರೆ 4, ಧಾರವಾಡ 8, ಗದಗ 9, ಹಾಸನ 91, ಹಾವೇರಿ 1, ಕಲಬುರ್ಗಿ 5, ಕೊಡಗು 81, ಕೋಲಾರ 35, ಕೊಪ್ಪಳ 2, ಮಂಡ್ಯ 26, ಮೈಸೂರು 102, ರಾಯಚೂರು 1, ರಾಮನಗರ 3, ಶಿವಮೊಗ್ಗ 34, ತುಮಕೂರು 73, ಉಡುಪಿ 135, ಉತ್ತರಕನ್ನಡ 41, ವಿಜಯಪುರ 2, ಯಾದಗಿರಿ ಜಿಲ್ಲೆಯಲ್ಲಿ 1 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 5, ಚಿಕ್ಕಬಳ್ಳಾಪುರ 1, ದಕ್ಷಿಣಕನ್ನಡ 4, ಕೊಡಗು 2, ಕೋಲಾರ 2, ಮಂಡ್ಯ 1, ಮೈಸೂರು 4, ತುಮಕೂರು 2, ಉತ್ತರ ಕನ್ನಡ 2 ಜನ ಸೇರಿದಂತೆ ರಾಜ್ಯದಲ್ಲಿಂದು 25 ಸಂಓಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...