alex Certify ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: 8090 ಸಕ್ರಿಯ ಪ್ರಕರಣ, 224 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ: 8090 ಸಕ್ರಿಯ ಪ್ರಕರಣ, 224 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 224 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,89,713 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,43,487 ಜನ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಇಂದು 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 38,107 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8090 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.37 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 148 ಜನರಿಗೆ ಸೋಂಕು ತಗುಲಿದೆ. 163 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6366 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ ಹೊರತುಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿಯೂ ಕೊರೊನಾ ಸೋಂಕು ಇಳಿಮುಖವಾಗಿದೆ. ದಕ್ಷಿಣ ಕನ್ನಡ 15, ಉಡುಪಿ 10 ಹೊಸ ಪ್ರಕರಣ ವರದಿಯಾಗಿದೆ.

ಬಾಗಲಕೋಟೆ, ಬಳ್ಳಾರಿ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

ಬೆಳಗಾವಿ, ಬೀದರ್, ಕೋಲಾರ, ಕೊಪ್ಪಳ, ಮಂಡ್ಯ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...