alex Certify BREAKING: ರಾಜ್ಯದಲ್ಲಿಂದು ಕೊರೋನಾ ಇಳಿಮುಖ: ಯಾವ ಜಿಲ್ಲೆಯಲ್ಲಿ ಎಷ್ಟು…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು ಕೊರೋನಾ ಇಳಿಮುಖ: ಯಾವ ಜಿಲ್ಲೆಯಲ್ಲಿ ಎಷ್ಟು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 254 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 546 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ 29,49,629 ಜನ ಗುಣಮುಖರಾಗಿದ್ದಾರೆ. 38,185 ಜನ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,94,255 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 0.38 ರಷ್ಟು ಇದೆ. ರಾಜ್ಯದಲ್ಲಿ 6412 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 152 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 464 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5117 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 152, ದಕ್ಷಿಣಕನ್ನಡ 14, ಹಾಸನ 15, ಮೈಸೂರು 30 ಹೊಸ ಪ್ರಕರಣ ವರದಿಯಾಗಿದೆ. ಬೆಂಗಳೂರು, ಧಾರವಾಡ, ಕಲಬುರಗಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...