alex Certify ರಾಜ್ಯದಲ್ಲಿಂದು 320 ಜನರಿಗೆ ಕೊರೋನಾ, 30 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ: ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 320 ಜನರಿಗೆ ಕೊರೋನಾ, 30 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 320 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ.

ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,257 ಸೋಂಕಿತರು ಸಾವನ್ನಪ್ಪಿದ್ದಾರೆ. ಇವತ್ತು ಒಂದೇ ದಿನ 317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,54,513 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 7306 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.30 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು 190 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 123 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5547 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಹಾವೇರಿ, ಕೋಲಾರ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 190, ಚಿಕ್ಕಮಗಳೂರು 10, ದಕ್ಷಿಣ ಕನ್ನಡ 20, ಹಾಸನ 17, ಕೊಡಗು 21, ಮೈಸೂರು 14 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಇಬ್ಬರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೋವಿಡ್ ಮರಣ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...