alex Certify ರಾಜ್ಯದಲ್ಲಿಂದು 28,264 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 28,264 ಜನರಿಗೆ ಸೋಂಕು ದೃಢ: ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 28,264 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 68 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,244 ಜನ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ 2,51,084 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 16.38 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 37,85,295 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,942 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 34,95,239 ಜನ ಗುಣಮುಖರಾಗಿದ್ದಾರೆ.

ಬೆಂಗಳೂರಿನಲ್ಲಿ 11,938 ಜನರಿಗೆ ಸೋಂಕು ತಗುಲಿದ್ದು, 14 ಜನರು ಸಾವನ್ನಪ್ಪಿದ್ದಾರೆ. 10,454 ಜನ ಗುಣಮುಖರಾಗಿದ್ದಾರೆ. 1,32,171 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ 964, ಧಾರವಾಡ 1356, ಹಾಸನ 859, ಮಂಡ್ಯ 953, ಮೈಸೂರು 2322, ತುಮಕೂರು 1165, ಉತ್ತರಕನ್ನಡ 780 ಜನರಿಗೆ ಕೊರೊನಾ ಸೋಂಕು ತಗುಲಿದೆ.

ಬಳ್ಳಾರಿ 7, ಬೆಂಗಳೂರು ನಗರ 14, ದಕ್ಷಿಣ ಕನ್ನಡ 7, ಮೈಸೂರು 10, ತುಮಕೂರು 4 ಸೇರಿ ರಾಜ್ಯದಲ್ಲಿ 68 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...