ಬೆಂಗಳೂರು: ರಾಜ್ಯದಲ್ಲಿ ಇಂದು 1137 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 20 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 3870 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,35,585 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,777 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,82,340 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.43 ರಷ್ಟು ಇದೆ. 13,431 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 646 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ. 1901 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6398 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಗಳಲ್ಲಿಯೂ ಕೊರೋನಾ ಇಳಿಮುಖವಾಗಿದೆ. ಬೆಳಗಾವಿ 42, ದಕ್ಷಿಣಕನ್ನಡ 33, ಮೈಸೂರು 64, ತುಮಕೂರು 35 ಹೊಸ ಪ್ರಕರಣ ವರದಿಯಾಗಿವೆ.
ದಕ್ಷಿಣಕನ್ನಡ 2, ಧಾರವಾಡ 2, ಬೆಂಗಳೂರು 8 ಸೇರಿ ರಾಜ್ಯದಲ್ಲಿ 20 ಜನ ಸೋಂಕಿತರು ಮೃತಪಟ್ಟಿದ್ದಾರೆ.