alex Certify BIG BREAKING: ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಕೊರೋನಾ ಭಾರಿ ಹೆಚ್ಚಳ; ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಕೊರೋನಾ ಭಾರಿ ಹೆಚ್ಚಳ; ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1598 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 20 ಸೋಂಕಿತರು ಮೃತಪಟ್ಟಿದ್ದಾರೆ. 1914 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,18,525 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,793 ಸೋಂಕಿತರು ಸಾವನ್ನಪ್ಪಿದ್ದಾರೆ. 28,57,776 ಜನ ಇದುವರೆಗೆ ಗುಣಮುಖರಾಗಿದ್ದಾರೆ. 23,930 ಸಕ್ರಿಯ ಪ್ರಕರಣಗಳು ಇವೆ.ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 348 ಜನರಿಗೆ ಸೋಂಕು ತಗುಲಿದೆ. ಒಬ್ಬರು ಮೃತಪಟ್ಟಿದ್ದು, 366 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 8493 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಗಳ ವಿವರ:

ಬಾಗಲಕೋಟೆ 2, ಬೀದರ್ 2, ಧಾರವಾಡ 7, ಗದಗ 1, ಹಾವೇರಿ 2, ಕಲಬುರ್ಗಿ 5, ಕೊಪ್ಪಳ 7, ರಾಯಚೂರು 4, ರಾಮನಗರ 0, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಪ್ರಕರಣ ವರದಿಯಾಗಿದೆ.

ಉಡುಪಿ 129, ಮೈಸೂರು 98, ಕೊಡಗು 83, ಹಾಸನ 80, ದಕ್ಷಿಣ ಕನ್ನಡ 438, ಬೆಂಗಳೂರು ನಗರ 348 ಪ್ರಕರಣಗಳು ಪತ್ತೆಯಾಗಿವೆ.

ಇಂದು ಬೆಳಗಾವಿ 1, ಬೆಂಗಳೂರು ನಗರ 1, ದಕ್ಷಿಣಕನ್ನಡ 6, ದಾವಣಗೆರೆ 1, ಧಾರವಾಡ 2, ಹಾಸನ 3, ಕೋಲಾರ 3, ಮೈಸೂರು 1, ಹಾಗೂ ಉತ್ತರಕನ್ನಡದಲ್ಲಿ 2 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...