ಬೆಂಗಳೂರು: ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳ ಸಂಖ್ಯೆ 1000 ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 2372 ಜನರಿಗೆ ಸೋಂಕು ತಗುಲಿದ್ದು, ಪಾಸಿಟಿವಿಟಿ ದರ ಶೇಕಡ 2.31 ರಷ್ಟು ಇದೆ.
5395 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 27 ಜನ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 35,697 ಸಕ್ರಿಯ ಪ್ರಕರಣಗಳಿವೆ. ಇವತ್ತು 1,02,279 ಪರೀಕ್ಷೆ ನಡೆಸಲಾಗಿದೆ.
ಬೆಂಗಳೂರಿನಲ್ಲಿ 1059 ಹೊಸ ಪ್ರಕರಣ ವರದಿಯಾಗಿದ್ದು, ಪಾಸಿಟಿವಿಟಿ ದರ 2.09 ರಷ್ಟು ಇದೆ. ಬೆಂಗಳೂರಿನಲ್ಲಿ 14 ಸಾವಿರದಷ್ಟು ಸಕ್ರಿಯ ಪ್ರಕರಣಗಳಿವೆ. 7 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ 2501 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 14,230 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39,26,669 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,51,298 ಜನ ಗುಣಮುಖರಾಗಿದ್ದಾರೆ. 39,640 ಸೋಂಕಿತರು ಮೃತಪಟ್ಟಿದ್ದಾರೆ.
ಬಳ್ಳಾರಿ 112, ಬೆಳಗಾವಿ 96, ದಕ್ಷಿಣಕನ್ನಡ 92, ಮೈಸೂರು 148 ಹೊಸ ಪ್ರಕರಣ ವರದಿಯಾಗಿವೆ.
ಬೆಂಗಳೂರು ನಗರ 7, ದಕ್ಷಿಣ ಕನ್ನಡ 3, ದಾವಣಗೆರೆ 2, ಧಾರವಾಡ 2, ಮೈಸೂರು 4, ತುಮಕೂರು 2 ಸೇರಿ ರಾಜ್ಯದಲ್ಲಿ 27 ಜನ ಸೋಂಕಿತರು ಮೃತಪಟ್ಟಿದ್ದಾರೆ.